ತಾವರಗೇರಾದಲ್ಲಿ ಮತ್ತೆ ಕಾಣಿಸಿಕೊಂಡ ‘ಚಿರತೆ’ ಆತಂಕದಲ್ಲಿ ಜನತೆ

N Shameed
0 Min Read

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಶನಿವಾರ ಬೆಳಗಿನ ಜಾವ ಸಮೀಪದ ಗಾಣಗಿತ್ತಿ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಕಳೆದ ಮೂರು ವರ್ಷಗಳ ಹಿಂದೆ ಚಿರತೆ ಪ್ರತ್ಯಕ್ಷಗೊಂಡಿದ್ದು ಅವುಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು ಈಗ ಮತ್ತೊಮ್ಮೆ ಚಿರತೆ ಕಾಣಿಸಿಕೊಂಡಿರುವುದು ಜನರು ಭಯಭೀತಿ ಗೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಪ್ರಾದೇಶಿಕ ಅರಣ್ಯ ವಲಯಾಧಿಕಾರಿ ಅನ್ವರ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ರಿಯಾಜ್ ಗನಿ ನೇತೃತ್ವದಲ್ಲಿ ಕಾರ್ಯ ಪ್ರವೃತ್ತ ರಾಗಿದ್ದಾರೆ. ಜೊತೆಗೆ ಒಬ್ಬಂಟಿಯಾಗಿ ಸಂಚರಿಸದಂತೆ ಮತ್ತು ಚಿರತೆ ಕಂಡ ತಕ್ಷಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

Share this Article
error: Content is protected !!