ಸಡಗರ ಸಂಭ್ರಮದಿಂದ ನಡೆದ ಶ್ರೀ ಮೌನೇಶ್ವರ ರಥೋತ್ಸವ

N Shameed
0 Min Read

 

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ಮೌನೇಶ್ವರರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು.
ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು.
ಶನಿವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಲೇಬಗಿರಿ ಮಠದ ಶ್ರೀ ನಾಗಮೂರ್ತಿ ಹಾಗೂ ದಿವಾಕರ ಸ್ವಾಮಿಗಳು ರಥೋತ್ಸವ ಕ್ಕೆ ಚಾಲನೆ ನೀಡಿದರು.


ವಿಶ್ವಕರ್ಮ ಸಮಾಜದ ಅಧ್ಯಕ್ಷ ರಾದ ಉಮ್ಮಣ್ಣ ಬಡಿಗೇರ, ಉಪಾಧ್ಯಕ್ಷ ಮಲ್ಲಪ್ಪ ಕೊಪ್ಪಳ ಹಾಗೂ ಸಮಾಜದ ಮುಖಂಡರು ಹಾಗೂ ಪಟ್ಟಣದ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

Share this Article
error: Content is protected !!