ಮಸ್ಕಿ ಕ್ಷೇತ್ರದಲ್ಲಿ ಅಧಿಕಾರ ದುರ್ಬಳಕೆಯಿಂದ ಪ್ರಜಾಪ್ರಭುತ್ವ ಕಗ್ಗೊಲೆ..!

N Shameed
1 Min Read

 

ವರದಿ ಎನ್ ಶಾಮೀದ್ ತಾವರಗೇರಾ

ಮಸ್ಕಿ: ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಣ ಹಂಚುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಶುಕ್ರವಾರದಂದು ಮಸ್ಕಿಯಲ್ಲಿ ನಡೆದ ಕಾಂಗ್ರೆಸ್ ಸಾಂಕೇತಿಕ ಧರಣಿ ನಡೆಸುವ ಮೂಲಕ ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹಾಗೂ ಬಸವರಾಜ ರಾಯರೆಡ್ಡಿ ಮಾತನಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹಣ ಹಂಚಿ ಮತದಾರರನ್ನು ತಪ್ಪು ದಾರಿಗೆ ಎಳೆಯುವ ವಿಡಿಯೋ ಸಾಕ್ಷಿ ಇದ್ದರೂ ಕೂಡ ಚುನಾವಣಾ ಅಧಿಕಾರಿಗಳು ಕಂಡು ಕಾಣದಂತೆ ಯಾವುದೇ ಕ್ರಮ ಕೈಗೊಳ್ಳದೇ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ಕ್ಷೇತ್ರದದಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿದ್ದಾರೆ.

ಈ ಸಂದರ್ಭದಲ್ಲಿ ಮಸ್ಕಿ ಕ್ಷೇತ್ರದ ಉಸ್ತುವಾರಿ ಆರ್ ದೃವನಾರಾಯಣ, ಬಿ ವಿ ನಾಯಕ, ಮಾಜಿ ಸಚಿವರಾದ ಕೃಷ್ಣ ಬೈರೆಗೌಡ, ಶಿವರಾಜ ತಂಗಡಗಿ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ, ರಾಘವೇಂದ್ರ ಹಿಟ್ನಾಳ, ಅಭ್ಯರ್ಥಿ ಬಸವನಗೌಡ ತುರುವಿಹಾಳ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ನಂತರ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ತಪ್ಪಿತಸ್ಥ ರ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Share this Article
error: Content is protected !!