ತಾವರಗೇರಾ: ಮಾಸ್ಕ್ ಧರಿಸದಿದ್ದರೇ ಬೀಳುತ್ತೆ ದಂಡ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೊನಾ ಪ್ರಕರಣ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ನಿಯಮಗಳು ಜಾರಿಗೊಳಿಸಿದ ಹಿನ್ನಲೆಯಲ್ಲಿ ಸ್ಥಳೀಯ ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಮಾಸ್ಕ್ ಧರಿಸದೇ ಇರುವವರಿಗೆ ದಂಡ ಹಾಕುವ ಮೂಲಕ ಸಾರ್ವಜನಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಪಟ್ಟಣದಲ್ಲಿ ಎಚ್ಚರಿಕೆ ನೀಡುವ ಮೂಲಕ ಸರ್ಕಾರದ ನಿಯಮಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದ್ದಾರೆ.
ದ್ವಿಚಕ್ರ ವಾಹನ, ಟಂಟಂ, ಕ್ರಷರ್ ಪ್ರಯಾಣಿಕರು ಕೂಡ ಕಡ್ಡಾಯವಾಗಿ ಮಾಸ್ಕ ಧರಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ವರ್ಗದವರಿದ್ದರು.

Share this Article
error: Content is protected !!