ತಾವರಗೇರಾ: ಪರಸ್ಪರ ಬೈಕ್ ಡಿಕ್ಕಿ ಸ್ಥಳದಲ್ಲೇ ಓರ್ವನ ಸಾವು..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ಸಮೀಪದ ಗರ್ಜಿನಾಳ ಕ್ರಾಸ್ ಹತ್ತಿರ ಎರಡು ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದರೇ, ನಾಲ್ಕು ಜನರಿಗೆ ಗಾಯವಾದ ಘಟನೆ ನಡೆದಿದೆ.
ಮೃತ ದುರ್ದೈವಿಯು ಸಂತೋಷ ಲಚಮಪ್ಪ ಕಳಮಳ್ಳಿ ತಾಂಡಾ (28) ಎಂದು ಗುರುತಿಸಲಾಗಿದೆ.
ತಾವರಗೇರಾದಿಂದ ಕಳಮಳ್ಳಿ ತಾಂಡಾಕ್ಕೆ ಹೆಂಡತಿ ಹಾಗೂ ಇಬ್ಬರು ಮಕ್ಕಳೊಂದಿಗೆ ತೆರಳುವಾಗ ಗರ್ಜಿನಾಳ ಕ್ರಾಸ್ ಹತ್ತಿರ ಎದುರಿಗೆ ಬಂದ ಬಂದ ದ್ವೀಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಹೆಂಡತಿ ಹಾಗೂ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರನಿಗೂ ಕೂಡ ತೀವ್ರ ಗಾಯಗಳಾಗಿದ್ದು. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ‌.

Share this Article
error: Content is protected !!