ತಾವರಗೇರಾ ಠಾಣೆಯ ಮೂವರು ಸಿಬ್ಬಂದಿಗೆ ಎಸ್ ಪಿ ಅವರಿಂದ ನಗದು ಪುರಸ್ಕಾರ..!

N Shameed
1 Min Read

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ಕೊಪ್ಪಳ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳನ್ನು ಪತ್ತೆ ಹಚ್ಚಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಟಿ ಶ್ರೀಧರ್ ಅವರು ನಗದು ಬಹುಮಾನ ಘೋಷಣೆ ಮಾಡಲಾಗಿದ್ದು ಅದರಲ್ಲಿ ಪಟ್ಟಣದ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳು ನಗದು ಪುರಸ್ಕಾರ ಪಡೆದಿದ್ದಾರೆ.
ಸ್ಥಳೀಯ ಠಾಣೆಯ ಎಎಸ್ಐ ಅತೀಕ್ ಅಹಮ್ಮದ್, ಬಸವರಾಜ ಇಂಗಳದಾಳ, ಮುಖ್ಯ ಪೇದೆ ಶಿವಪುತ್ರಪ್ಪ ನಗದು ಬಹುಮಾನ ಪಡೆದಿರುವುದು ತಾವರಗೇರಾ ಠಾಣೆಗೆ ಪ್ರಶಂಸನೀಯ ಎಂದು ಮೇಲಾಧಿಕಾರಿಗಳಾದ ಗಂಗಾವತಿ ಡಿವಾಯ್ ಎಸ್ ಪಿ ಆರ್ ಎಸ್ ಉಜ್ಜನಕೊಪ್ಪ, ಕುಷ್ಟಗಿ ಸಿಪಿಐ ನಿಂಗಪ್ಪ ಆರ್, ಸ್ಥಳೀಯ ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಸೇರಿದಂತೆ ಸಿಬ್ಬಂದಿ ವರ್ಗದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಜೊತೆಗೆ ಇದೇ ರೀತಿ ಉತ್ತಮ ಕಾರ್ಯ ನಿರ್ವಹಿಸಿ ಮತ್ತಷ್ಟು ಹೆಸರು ಹಾಗೂ ಕೀರ್ತಿ ಯನ್ನು ತರಬೇಕೆಂದು ಉದಯವಾಹಿನಿಯ ಆಶಯ ವಾಗಿದೆ.

Share this Article
error: Content is protected !!