ತಾವರಗೇರಾ: ಗುಟ್ಕಾ ಮಾರುತ್ತಿದ್ದ ಅಂಗಡಿಗಳ ಮೇಲೆ ದಾಳಿ..!

N Shameed
1 Min Read

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ತಂಬಾಕು ಉತ್ಪನ್ನಗಳ (ಗುಟ್ಕಾ) ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಸ್ಥಳದಲ್ಲೇ ದಂಡ ಹಾಕಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸ್ಥಳೀಯ ಪೊಲೀಸ್, ಕಂದಾಯ ಹಾಗೂ ವೈದ್ಯಾಧಿಕಾರಿಗಳ ಸಹಯೋಗದೊಂದಿಗೆ ಪಟ್ಟಣದ ವಿವಿಧ ಕಿರಾಣಿ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದರು.


ಈ ಸಂಧರ್ಬದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರ ಮೆಹೆಬೂಬ, ಸ್ಥಳೀಯ ವೈದ್ಯಾಧಿಕಾರಿ ಡಾ. ಶ್ರೀಧರ, ನಾಡ ತಹಶಿಲ್ದಾರ ಮಂಜುಳಾ ಎಚ್ ಪತ್ತಾರ, ಎಎಸ್ಐ ಬಸವರಾಜ ನಾಯಕವಾಡಿ, ಕಂದಾಯ ಇಲಾಖೆಯ ಸಿಬ್ಬಂದಿ ಶ್ರೀ ಶೈಲ ಮಲ್ಲಿಕಾರ್ಜುನ, ಹಾಗೂ ಶಾಮಣ್ಣ ಸಿದ್ದಾಪುರ ಉಪಸ್ಥಿತರಿದ್ದರು.

Share this Article
error: Content is protected !!