ಬ್ಯಾಂಕಿಗೆ ಬರುವ ಗ್ರಾಹಕರ ಮೇಲೆ ಕಣ್ಣಿಟ್ಟಿರುವ, ಕಳ್ಳರ ಗ್ಯಾಂಗ್..!

N Shameed
1 Min Read

ಪ್ರೀತಿಯ ಓದುಗ ದೊರೆಗಳೇ,
ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.

………………………………………………..

ವರದಿ ಎನ್ ಶಾಮೀದ್ ತಾವರಗೇರಾ

ಕೊಪ್ಪಳ: ಜಿಲ್ಲೆಯಾದ್ಯಂತ ಬ್ಯಾಂಕಿಗೆ ಹೋಗಿ ಬರುವ ಗ್ರಾಹಕರ ಮೇಲೆ ಕಣ್ಣಿಟ್ಟು  ಹಣ ಕಳ್ಳತನ ಮಾಡುವ ಗುಂಪೊಂದು ಜಿಲ್ಲೆಯಲ್ಲಿ ಸಕ್ರಿಯವಾಗಿದ್ದು ಸಾರ್ವಜನಿಕರು ಇದರಿಂದ ಎಚ್ಚೆತ್ತುಕೊಳ್ಳ ಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಶ್ರೀಧರ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಈ ರೀತಿಯ ಘಟನೆ ನಡೆದಿದ್ದು ಪೊಲೀಸ್ ಇಲಾಖೆಗಳ ಮಾಹಿತಿ ಪ್ರಕಾರ ತಮಿಳುನಾಡು ಮೂಲದ ವ್ಯಕ್ತಿಗಳಿರುವ ತಂಡವು ಕೊಪ್ಪಳ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದು ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆ ವಹಿಸಿ ಅನುಮಾನಿತ ವ್ಯಕ್ತಿಗಳು ಕಂಡು ಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಅಥವಾ ಇಲಾಖೆಯ 112 ವಾಹನಕ್ಕೆ ಕರೆ ಮಾಡಲು ತಿಳಿಸಿದ್ದಾರೆ.
ಕಳ್ಳತನ ಮಾಡಿರುವ ವ್ಯಕ್ತಿಗಳ ಛಾಯಾಚಿತ್ರ ಹಾಗೂ ಅವರು ಉಪಯೋಗಿಸುವ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಗಿದ್ದು ಆದಷ್ಟೂ ಈ ಬಗ್ಗೆ ನಿಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
error: Content is protected !!