ತಾವರಗೇರಾ: “ದೀಪಾವಳಿ” ಜೂಜಾಟ ನಿಷೇಧ, ಪಿಎಸ್ಐ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೂಜಾಟದಂತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಸ್ಥಳೀಯ ಠಾಣಾಧಿಕಾರಿ ವೈಶಾಲಿ ಝಳಕಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮೇಲಾಧಿಕಾರಿಗಳ ಆದೇಶದಂತೆ ಪಟ್ಟಣ ಸೇರಿದಂತೆ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಹಬ್ಬದ ಸಂದರ್ಭದಲ್ಲಿ ಜೂಜಾಟದಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದ್ದಾರೆ.

ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಬ್ಬವನ್ನು ಆಚರಿಸಿ ಶಾಂತಿ ಕಾಪಾಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಿಬ್ಬಂದಿ ಶಂಕರ್ ಹೆಬ್ಬಲಿ, ಬಸವರಾಜ ಇಂಗಳದಾಳ, ಗುಂಡಪ್ಪ ಸೇರಿದಂತೆ ಇನ್ನೀತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share this Article
error: Content is protected !!