ಜಿಲ್ಲಾ ನ್ಯಾಯಾಧೀಶರ ವಿರುದ್ಧ : ಹೂಲಗೇರಿ ಆಕ್ರೋಶ

Nagaraj M
1 Min Read

 

ವರದಿ : ನಾಗರಾಜ್ ಎಸ್ ಮಡಿವಾಳರ್
ಮುದಗಲ್ : ಡಾ. ಬಿ ಆರ್  ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ
ಜಿಲ್ಲಾ ನ್ಯಾಯಾಧೀಶರ ವಿರುದ್ಧ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ  ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಜನವರಿ 26 ರಂದು ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ವೇಳೆ  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಡಾ.ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು ಖಂಡನಿಯ. ಅವರ  ವಿರುದ್ಧ ದೇಶ ದ್ರೋಹಿ ಪ್ರಕರಣ ದಾಖಲು ಮಾಡಬೇಕು ಎಂದು ಸರಕಾರಕ್ಕೆ ಪತ್ರಿಕೆಗಳ ಮೂಲಕ ಒತ್ತಾಯ ಮಾಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾಹುದ್ ಸಾಬ್, ಪಿ. ಎಲ್. ಡಿ ಬ್ಯಾಂಕ್ ಅಧ್ಯಕ್ಷ ಮಹಾಂತೇಶ್ ಪಾಟೀಲ್, ದಲಿತ ಪ್ಯಾಂಥರ್ ವಿಭಾಗಿಯ ಕಾರ್ಯದರ್ಶಿ ರಘುವೀರ ಚಲುವಾದಿ,ಸಂಗಪ್ಪ ಹಿರೇಮನಿ, ಕೃಷ್ಣ ಚಲುವಾದಿ, ರಮೇಶ್ ಚಲುವಾದಿ ಇದ್ದರು.
Share this Article
error: Content is protected !!