ಜೆಡಿಎಸ್ ಪಕ್ಷದಿಂದ ಎಸ್ ಆರ್ ರಸೂಲ್ ಉಚ್ಛಾಟನೆ

Nagaraj M
1 Min Read
 ವರದಿ : ನಾಗರಾಜ್ ಎಸ್ ಮಡಿವಾಳರ
 
ಮುದಗಲ್ :  ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ ಮುದಗಲ್ಲ ಪುರಸಭೆ ಸದಸ್ಯ ಎಸ್.ಆರ್.ರಸೂಲ್ ರನ್ನ ಉಚ್ಛಾಟನೆ ಮಾಡಲಾಗಿದೆ ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಬಸವರಾಜ ಮಾಕಾಪುರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದಿಂದ ಮುದಗಲ್ಲ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಆರ್.ರಸೂಲ್ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಕೇಳಿ ಬರುತ್ತಿದ್ದವು. ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಪಕ್ಷದ ಕಾರ್ಯಕ್ರಮದಿಂದ ದೂರ ಉಳಿದು ಪಕ್ಷದ  ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದರು. ಅಲ್ಲದೇ ರವಿವಾರ ಮುದಗಲ್ಲ ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮದ  ವೇದಿಕೆಯಲ್ಲಿ ಇತರೆ  ಪಕ್ಷದ ಮುಖಂಡರಿದ್ದು ಜೊತೆಗೆ ಪಕ್ಷದ ತಾಲೂಕಾಧ್ಯಕ್ಷರ  ಸಮ್ಮುಖದಲ್ಲೇ ಜೆಡಿಎಸ್ ನಿಯೋಜಿತ ಅಭ್ಯರ್ಥಿ ಸಿದ್ದು ವಾಯ್.ಬಂಡಿ ಅವರಿಗೆ ಅವಮಾನಕರ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಸಿದ್ದು ವಾಯ್  ಬಂಡಿರವರ  ಆದೇಶದ ಮೇರೆಗೆ ಎಸ್ ಆರ್ ರಸೂಲ್ ರನ್ನ  ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Share this Article
error: Content is protected !!