ತಾವರಗೇರಾ:- “ಕಮಲ” ಬಿಟ್ಟು, “ಕೈ” ಹಿಡಿದ ಚಂದ್ರಶೇಖರ ನಾಲತವಾಡ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಪಟ್ಟಣದ ಬಿಜೆಪಿ ಮುಖಂಡ ಹಾಗೂ ತಾಲೂಕ ಪಂಚಮಸಾಲಿ ಅಧ್ಯಕ್ಷರಾದ ಚಂದ್ರಶೇಖರ ನಾಲತವಾಡ ಬುಧುವಾರದಂದು ಬೆಂಗಳೂರಿನಲ್ಲಿ ಬಿಜೆಪಿ ಪಕ್ಷ ತೊರೆದು ಅಧಿಕೃತವಾಗಿ ಮಾಜಿ ಮುಖ್ಯಮಂತ್ರಿ ಗಳಾದ ಸಿದ್ದ ರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು, ಇವರ ಜೊತೆ ಕುಷ್ಟಗಿ ಎಪಿಎಮ್ ಸಿ ಮಾಜಿ ಅಧ್ಯಕ್ಷರಾದ ಶರಣಪ್ಪ ಸಾಹುಕಾರ್ ಹಂಚಿನಾಳ ಕೂಡ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶಿವರಾಜ ತಂಗಡಗಿ, ಶಾಸಕರಾದ ಅಮರೇಗೌಡ ಬಯ್ಯಾಪುರ, ಎಮ್ ಎಲ್ ಸಿ ಶರಣೇಗೌಡ ಬಯ್ಯಾಪುರ, ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Share this Article
error: Content is protected !!