ತಾವರಗೇರಾ: ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಪಟ್ಟಣದಲ್ಲಿ 67 ನೇ ಕನ್ನಡ ರಾಜ್ಯೋತ್ಸವ ವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಶಾಮೀದ್ ಅಲಿ ವೃತ್ತದಲ್ಲಿ ಕನ್ನಡ ಸೇನೆಯ ವತಿಯಿಂದ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಊರಿನ ಪ್ರಮುಖರು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕರ್ನಾಟಕ ನವ ನಿರ್ಮಾಣ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವ ವನ್ನು ಆಚರಿಸಲಾಯಿತು, ಹಾಗೂ ಸ್ಥಳೀಯ ಕನಕದಾಸ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂಧರ್ಬದಲ್ಲಿ ಪದಾಧಿಕಾರಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದರು.

ಅದೇ ರೀತಿ ಶಾಮೀದ್ ಅಲಿ ಕಟ್ಟಡ ಕಾರ್ಮಿಕ ಸಂಘದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ವಿವಿಧ ಇಲಾಖೆ ಹಾಗೂ ಶಾಲಾ ಕಾಲೇಜುಗಳಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ವನ್ನು ಆಚರಿಸಿದರು.

Share this Article
error: Content is protected !!