ಪ್ರಾಮಾಣಿಕ ಹಾಗು ಸಜ್ಜನ ರಾಜಕಾರಣಿ ಬಯ್ಯಾಪೂರ ಅವರನ್ನು ಗೆಲ್ಲಿಸಿ,:- ಸಿದ್ದರಾಮಯ್ಯ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ : ಜನಪರ ಕಾಳಜಿ ಹಾಗೂ ಸಜ್ಜನ ರಾಜಕಾರಣಿ ಮತ್ತು ಕ್ಷೇತ್ರದ ಅಭಿವೃದ್ಧಿಯಲ್ಲಿ ಮುಂಚೂಣಿ ಯಲ್ಲಿರುವ ಶಾಸಕರಾದ ಅಮರೇಗೌಡ ಬಯ್ಯಾಪೂರ ಅವರನ್ನು ಬರುವ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಅವರು ಕುಷ್ಟಗಿಯಲ್ಲಿ ಅಮರೇಗೌಡ ಬಯ್ಯಾಪೂರ ಅವರ 69 ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಿರುವ ಬಿಜೆಪಿ ಬ್ರಷ್ಟ ಸರ್ಕಾರವನ್ನು ತೆಗೆದು ರಾಜ್ಯದ ಹಿತದೃಷ್ಟಿಯಿಂದ ಕೋಮುವಾದದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಜನರು ರೊಚ್ಚಿಗೆದ್ದಿದ್ದು ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಅಮರೇಗೌಡ ಬಯ್ಯಾಪೂರ ಅವರಿಗೆ ಉನ್ನತ ಸ್ಥಾನಮಾನ ಸಿಗಲಿ ಎಂದು ಹಾರೈಸಿದ ಸಿದ್ದರಾಮಯ್ಯ,

 ನಾನು ಕುಷ್ಟಗಿಯಿಂದ ಸ್ಫರ್ಧೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಕುಷ್ಟಗಿ ಕ್ಷೇತ್ರದಿಂದ ಅಮರೇಗೌಡ ಬಯ್ಯಾಪೂರ ಅವರನ್ನು ಗೆಲ್ಲಿಸಿ ಎಂದು ಕರೆ ನೀಡಿದರು.

ಈ ಸಂಧರ್ಬದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸೇರಿದಂತೆ ‌ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share this Article
error: Content is protected !!