ತಾವರಗೇರಾ;- ಸರ್ಕಾರಿ ಕಾರ್ಯಕ್ರಮವನ್ನು, ಪಕ್ಷದ ಪರವಾಗಿ ಬಳಸಿಕೊಂಡ ಬಯ್ಯಾಪೂರ,:- ದೊಡ್ಡನಗೌಡ ಪಾಟೀಲ್..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಸಮೀಪದ ಮೆಣೇಧಾಳ ಗ್ರಾಮದ ಹೊರವಲಯದಲ್ಲಿ ಅಂದಾಜು 22 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಿರ್ಮಿಸಲಾಗಿರುವ ಮುರಾರ್ಜಿ ವಸತಿ ಶಾಲೆ ಕಟ್ಟಡ ವನ್ನು ಸೋಮವಾರದಂದು ಶಾಸಕ ಅಮರೇಗೌಡ ಬಯ್ಯಾಪೂರ ಉದ್ಘಾಟಿಸಿದ ಬೆನ್ನಲ್ಲೇ ಬಿಜೆಪಿ ಯಿಂದ ತೀವ್ರ ಆಕ್ಷೇಪ ವ್ಯಕ್ತವಾದ ಘಟನೆ ನಡೆದಿದೆ.

ಈ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಸೋಲಿನ ಬೀತಿ ಯಲ್ಲಿರುವ ಶಾಸಕರು ಸದರಿ ಸರ್ಕಾರಿ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಹಣ ಕೊಟ್ಟು ಕರಿಸುವ ಮೂಲಕ ಸರ್ಕಾರಿ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವೆಂದು ಬಿಂಬಿಸಿರುವುದು ಖಂಡನೀಯ ಕಾರ್ಯಕ್ರಮ ವನ್ನು ತರಾತುರಿಯಲ್ಲಿ ನಡೆಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರನ್ನು ಹಾಗೂ ಸಂಸದರನ್ನು ಕರೆಸಿ ಮಾಡಬಹುದಾಗಿತ್ತು ಆದರೆ ಬರುವ ಚುನಾವಣೆಯಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಈ ರೀತಿ ಕೆಲಸ ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಟೀಕಿಸಿದರು ಜೊತೆಗೆ ಇಲಾಖೆ ಅಧಿಕಾರಿಗಳು ಕೂಡ ಸರಿಯಾದ ಮಾಹಿತಿ ನೀಡದಿರುವುದು ಕಂಡು ಬಂದಿದ್ದು ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವದು ಮತ್ತು ಕಾರ್ಯಕ್ರಮಕ್ಕೆ ಆಗಮಿಸಿದ ಕಾರ್ಯಕರ್ತರು ಶಾಸಕ ಬಯ್ಯಾಪೂರ ಟಿ ಶಟ್೯ ಧರಿಸಿ ಆಗಮಿಸಿದ್ದು, ಕಾಂಗ್ರೆಸ್ ಕಾರ್ಯಕ್ರಮ ಪರಿಣಮಿಸಿರುವುದು ಕಂಡುಬಂದಿದೆ ಎಂದು ಆರೋಪಿಸಿದ್ದಾರೆ.

Share this Article
error: Content is protected !!