ತಾವರಗೇರಾ:- ಅದ್ದೂರಿಯಾಗಿ ನಡೆದ ರಥೋತ್ಸವ..!

N Shameed
1 Min Read

ರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ;- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಇಂದಲೇ ಪೂಜಾ ವಿಧಿವಿಧಾನಗಳಿಂದ ಅದ್ದೂರಿಯಾಗಿ ಜರುಗಿತು.

ಜಾತ್ರಾ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಉಚಿತ ಸಾಮೂಹಿಕ ವಿವಾಹ ಹಾಗೂ ಉಪನಯನ ಜೊತೆಗೆ ಸಿಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ, ಕಬಡ್ಡಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಸಂಜೆ ರಥೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು ಈ ಸಂದರ್ಭದಲ್ಲಿ ಅಂಕಲಿ ಮಠದ ಶ್ರೀ ಗಳು, ಗುಮ್ಮಗೋಳದ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಠಾಧಿಶರು ಹಾಗೂ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಹಾಗೂ ಪ್ರಮುಖರಾದ ಶೇಖರಗೌಡ ಪೊಲೀಸ್ ಪಾಟೀಲ್, ವೀರಭದ್ರಪ್ಪ ನಾಲತವಾಡ, ಕೆ ಮಹೇಶ, ಸೇರಿದಂತೆ ಜಾತ್ರಾ ಸಮಿತಿಯ ಸದಸ್ಯರು ಸೇರಿದಂತೆ ಸಾವಿರಾರು ಜನರು ರಥೋತ್ಸವ ದಲ್ಲಿ ಪಾಲ್ಗೊಂಡಿದ್ದರು.

Share this Article
error: Content is protected !!