ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ,- ಸತೀಶ್ ಜಾರಕಿಹೊಳಿ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:– ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಿದ್ದು ಈ ಬಾರಿ ಜನಪರ ಕಾರ್ಯಗಳನ್ನು ಮಾಡಲು ವಿಫಲವಾದ ಬಿಜೆಪಿ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ‌ ಎಂದು ಕೆಪಿಸಿಸಿ ಕಾರ್ಯ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಅವರು ಸ್ಥಳೀಯ ಖಾಸಗಿ ಸಮಾರಂಭದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿ ಭಾರತ ಜೋಡೋ ಯಾತ್ರೆ ಹಾಗು ಮೇಕೆದಾಟು ಯೋಜನೆ ಕುರಿತು ಮತ್ತು ಈಗ ನಡೆಯುತ್ತಿರುವ ಪ್ರಜಾ ದ್ವನಿ ಯಾತ್ರೆಯಲ್ಲಿ ಸಿಗುತ್ತಿರುವ ಬೆಂಬಲದಿಂದಾಗಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಅದರಂತೆ ಕುಷ್ಟಗಿ ಕ್ಷೇತ್ರ ಸೇರಿದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ವಿಧಾನ ಪರಿಷತ್ ಸದಸ್ಯ ಶರಣೇಗೌಡ ಪಾಟೀಲ್ ಬಯ್ಯಾಪೂರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share this Article
error: Content is protected !!