ತಾವರಗೇರಾ:- ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಶೇಖರ್ ನಾಲತವಾಡ..!

N Shameed
0 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ;- ಪಟ್ಟಣದ ಕಾಂಗ್ರೆಸ್ ಮುಖಂಡ ಚಂದ್ರಶೇಖರ ಆದಪ್ಪ ನಾಲತವಾಡ ಇವರನ್ನು ಕುಷ್ಟಗಿ ವಿಧಾನ ಸಭಾ ಕ್ಷೇತ್ರದ ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯದ್ಯಕ್ಷರಾದ ಡಿಕೆ ಶಿವಕುಮಾರ್ ಅವರು ನೇಮಕ ಆದೇಶ ಪತ್ರ ನೀಡಿದ್ದಾರೆ.

ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆ ಗಾಗಿ ಪಕ್ಷಕ್ಕೆ ನಿಷ್ಠಾವಂತ ಕಾರ್ಯನಿರ್ವಹಿಸಿ ಪಕ್ಷಕ್ಕೆ ಹೆಚ್ಚಿನ ಯಶಸ್ಸು ತರಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Share this Article
error: Content is protected !!