ವರದಿ ಎನ್ ಶಾಮೀದ್ ತಾವರಗೇರಾ
ಕುಷ್ಟಗಿ:- ಚುನಾವಣೆಗು ಮುನ್ನವೇ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಜಟಾಪಟಿಯ ಘಟನೆ ಪಟ್ಟಣದಲ್ಲಿ ನಡೆದಿದೆ.
Video Player
00:00
00:00
ಖಾಸಗಿ ವಾಹಿನಿಯೊಂದು ಹೆದ್ದಾರಿ ವೃತ್ತದಲ್ಲಿ ಹಮ್ಮಿಕ್ಕೊಂಡಿದ್ದ ಚುನಾವಣೆ ಬಹಿರಂಗ ಚರ್ಚೆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಆರೋಪ ಪ್ರತ್ಯಾರೋಪ ನಡೆದು ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜರುಗಿದಾಗ ಪೊಲೀಸರ ಮಧ್ಯ ಪ್ರವೇಶಿಸಿ ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡೆಸುವಲ್ಲಿ ಯಶಸ್ವಿ ಯಾದರು,.
Video Player
00:00
00:00
ಆದರೂ ಕೂಡ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರ ವಿರೋಧ ಘೋಷಣೆ ಕೂಗುತ್ತಾ , ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪಿಎಸ್ ಐ ಮೌನೇಶ ರಾಠೋಡ ಹಾಗೂ ಸಿಬ್ಬಂದಿ ವರ್ಗದವರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಎರಡು ಚದುರಿಸುವಲ್ಲಿ ಯಶಸ್ವಿಯಾದರು.
ಈ ಘಟನೆಯಿಂದಾಗಿ ಮುಂದೆ ಬರುವ ಚುನಾವಣೆ ಸಂದರ್ಭದಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯ ವಾಗಿದೆ.