ಕುಷ್ಟಗಿ:- ಬಿಜೆಪಿ ಅಭ್ಯರ್ಥಿ ಪರ ಸುದೀಪ್ ಭರ್ಜರಿ ಪ್ರಚಾರ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ಕುಷ್ಟಗಿ:- ಚಿತ್ರನಟ ಸುದೀಪ್ ಅವರು ಬಿಜೆಪಿ ಅಭ್ಯರ್ಥಿಯಾದ ದೊಡ್ಡನಗೌಡ ಪಾಟೀಲ್ ಪರ ಮತಯಾಚನೆಗಾಗಿ ಪಟ್ಟಣಕ್ಕಿಂದು ಆಗಮಿಸಿ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು.

ಬುಧವಾರದಂದು ಪಟ್ಟಣಕ್ಕೆ ಆಗಮಿಸಿ ಪ್ರಮುಖ ವೃತ್ತಗಳಲ್ಲಿ ಮೆರವಣಿಗೆ ಮೂಲಕ ನೆರೆದಿದ್ದ ಸಾವಿರಾರು ಕಾರ್ಯಕರ್ತಲ್ಲಿ ದೊಡ್ಡನಗೌಡ ಪಾಟೀಲ್ ಅವರನ್ನು ಆರಿಸಿ ತರುವ ಮೂಲಕ ಈ ಬಾರಿ ಮತ್ತೊಮ್ಮೆ ಜನರ ಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೇಳಿದರು.

ಈ ಸಂದರ್ಭದಲ್ಲಿ ಎಮ್ ಎಲ್ ಸಿ ಗಳಾದ ಚಲುವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ, ಅಭ್ಯರ್ಥಿ ದೊಡ್ಡನಗೌಡ ಪಾಟೀಲ್ ಸೇರಿದಂತೆ ಬಿಜೆಪಿಯ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.

Share this Article
error: Content is protected !!