ತಾವರಗೇರಾ: ಪ್ರಕಾಶ ಮಳಗಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ..!

N Shameed
1 Min Read

ವರದಿ ಎನ್ ಶಾಮೀದ್ ತಾವರಗೇರಾ

ತಾವರಗೇರಾ:- ಸ್ಥಳೀಯ ಎಸ್ ಎಮ್ ವಿ ಪ್ರೌಢಶಾಲೆಯ ಶಿಕ್ಷಕ ಪ್ರಕಾಶ ಎಸ್ ಮಳಗಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

  ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಶನಿವಾರದಂದು ನಡೆದ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ರಾಜ್ಯ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಾಗಾರ ಕಾರ್ಯಕ್ರ‌ಮದಲ್ಲಿ ಪ್ರಶಸ್ತಿ ನೀಡಲಾಯಿತು.


ಕಾರ್ಯಕ್ರಮವನ್ನು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಮಲಿಂಗಾರೆಡ್ಡಿ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರು ಹಾಗೂ ದಿನೇಶ್ ಗುಂಡೂರಾವ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Share this Article
error: Content is protected !!