ವರದಿ ಎನ್ ಶಾಮೀದ್ ತಾವರಗೇರಾ
ತಾವರಗೇರಾ:- ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ದೇವಾಲಯ ಲೋಕಾರ್ಪಣೆಗೊಂಡ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ದೇವಸ್ಥಾನಗಳಲ್ಲಿ ಹೋಮ, ಹವನ ಹಾಗೂ ಪೂಜೆ ಸಂಭ್ರಮದಿಂದ ನಡೆಯಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀರಾಮನ ಭಾವಚಿತ್ರ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು.
ಮೆರವಣಿಗೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
Video Player
00:00
00:00
ನಂತರ ಇಲ್ಲಿಯ ಶ್ರೀರಾಮ ಮಂದಿರದಲ್ಲಿ ಅಭಿಷೇಕ ಪೂಜೆ ನಂತರ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.
Video Player
00:00
00:00
ಇದೇ ಸಂದರ್ಭದಲ್ಲಿ ರಾಜ್ಯದ ಹೆಸರಾಂತ ಪತ್ರಿಕೆಯಾದ ಉದಯವಾಣಿಯು ಪ್ರಕಟಿಸಿದ ವಿಶೇಷ ಪುರವಣಿಯನ್ನು ಗಣ್ಯರು ಶ್ರೀರಾಮ ಮಂದಿರದಲ್ಲಿ ಬಿಡುಗಡೆಗೊಳಿಸಿದರು, 44 ಪುಟಗಳಲ್ಲಿ ಪ್ರಕಟಗೊಂಡ ಉದಯವಾಣಿ ಪತ್ರಿಕೆಯಲ್ಲಿ ರಾಮ ಮಂದಿರದ ಬಗ್ಗೆ ವಿವರ ಮಾಹಿತಿಯೊಂದಿಗೆ ವಿಶೇಷವಾಗಿ ಬಂದಿದ್ದಕ್ಕಾಗಿ ಸಾರ್ವಜನಿಕರು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಮಾಜದ ಗಣ್ಯರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.