ಪ್ರಧಾನಮಂತ್ರಿ ಆವಾಸ ಯೋಜನೆಯ `ರಾಷ್ಟ್ರೀಯ` ಪುರಸ್ಕಾರಕ್ಕೆ ತಾವರಗೇರಾ ಪಟ್ಟಣದ ಶಕುಂತಲಾ ಮಲ್ಲಪ್ಪ ನಾಲತವಾಡ ಆಯ್ಕೆ

N Shameed
0 Min Read

 

ಎನ್ ಶಾಮೀದ್ ತಾವರಗೇರಾ

ಪ್ರಧಾನ ಮಂತ್ರಿ ಆವಾಸ ಯೋಜನೆಯಡಿಯಲ್ಲಿ ಅತ್ಯುತ್ತಮ ಮನೆ ನಿರ್ಮಾಣದ ಫಲಾನುಭವಿಗಳಿಗೆ ನೀಡಲಾಗುವ ರಾಷ್ಟ್ರೀಯ ಪುರಸ್ಕಾರಕ್ಕೆ ರಾಜ್ಯದಿಂದ ಮೂವರು ಫಲಾನುಭವಿಗಳು ಆಯ್ಕೆಯಾಗಿದ್ದು ಅದರಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣ ಪಂಚಾಯತಿಯ ಶಕುಂತಲಾ ಮಲ್ಲಪ್ಪ ನಾಲತವಾಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶುಕ್ರವಾರ ದಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಪ್ರಧಾನಮಂತ್ರಿಗಳ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂಧರ್ಬದಲ್ಲಿ ತಾವರಗೇರಾ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಶಂಕರ್ ಡಿ ಕಾಳೆ, ಸಿಬ್ಬಂದಿ ಶಾಮೂರ್ತಿ ಕಟ್ಟಿಮನಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this Article
error: Content is protected !!